Mysore
23
mist

Social Media

ಶುಕ್ರವಾರ, 02 ಜನವರಿ 2026
Light
Dark

ಮೈಸೂರು| ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯ ಕಾರ್ಯಕಾರಣಿ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಂಶಿ ಪ್ರಸನ್ನ ಕುಮಾರ್‌ ಅವರನ್ನು ಗೌರವಿಸಲಾಯಿತು.

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದಯಾಶಂಕರ ಮೈಲಿ, ಧರ್ಮಾಪುರ ನಾರಾಯಣ್‌, ವೀರಭದ್ರಪ್ಪ ಬಿಸ್ಲಳ್ಳಿ, ದಿನೇಶ್‌ ಕುಮಾರ್‌, ಮಹೇಶ್‌ ಭಗೀರಥ, ಶೇಖರ್‌ ಕಿರಗುಂಡ, ಕಾರ್ತಿಕ್‌ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.

ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ರಾಘವೇಂದ್ರ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.

ಸಮಾರಂಭದಲ್ಲಿ ರಾಜ್ಯ ಮಾಹಿತಿ ಆಯುಕ್ತರು ಹಾಗೂ ಹಿರಿಯ ಪತ್ರಕರ್ತರುಗಳಾದ ರುದ್ರಣ್ಣ ಹರ್ತಿಕೋಟಿ, ಕೆ ಬದ್ರುದ್ದೀನ್‌, ರಾಜಶೇಖರ್‌, ಡಾ.ಹರೀಶ್‌ ಕುಮಾರ್‌ ಅವರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.

Tags:
error: Content is protected !!