Mysore
19
few clouds

Social Media

ಬುಧವಾರ, 21 ಜನವರಿ 2026
Light
Dark

ಚಿಂತಾಮಣಿಯಲ್ಲಿ ‘ಅಖಂಡ-2’ ಟ್ರೇಲರ್ ಬಿಡುಗಡೆ; ಬಾಲಯ್ಯ ಚಿತ್ರಕ್ಕೆ ಶಿವಣ್ಣ ಬೆಂಬಲ

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ ಅತಿಥಿಯಾಗಿ ಭಾಗಿಯಾಗಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಹಸ ನಿರ್ದೇಶಕ ರವಿ ವರ್ಮಾ, ಅಯ್ಯಪ್ಪ ಹಾಗೂ ಶರತ್ ಲೋಹಿತಾಶ್ವ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನು ಓದಿ: IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ

ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ಶಿವರಾಜಕುಮಾರ್, ‘ನನ್ನ ಅಣ್ಣನ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಬಂದಿದ್ದೇನೆ. ನಾವು ಒಂದೇ ಕುಟುಂಬ. ಇವರ ತಂದೆ ನನಗೆ ದೊಡ್ಡಪ್ಪ. ಬಾಲಯ್ಯ ನನಗೆ ಅಣ್ಣ. ಇವರ ಕಾರ್ಯಕ್ರಮಕ್ಕೆ ಬರುವುದು ನಮಗೆ ಖುಷಿಯಾಗುತ್ತದೆ’ ಎಂದರು.

ಕನ್ನಡ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಪ್ರಾರಂಭಿಸಿದ ನಂದಮೂರಿ ಬಾಲಕೃಷ್ಣ, ‘ಶಿವಣ್ಣ ನನ್ನ ತಮ್ಮನ ತರಹ. ನಮ್ಮ ‘ಅಖಂಡ 2’ ಚಿತ್ರವು ಡಿ. 05ರಂದು ಬಿಡುಗಡೆಯಾಗುತ್ತಿದೆ. ‘ಅಖಂಡ 2’ ಚಿತ್ರವು ಕೇವಲ ತೆಲುಗು, ಕನ್ನಡ ಸಿನಿಮಾವಲ್ಲ. ಇದು ಪ್ಯಾನ್ ಇಂಡಿಯಾ ಸಿನಿಮಾ’ ಎಂದು ಹೇಳಿದರು.

ಬೋಯಪಾಟಿ ಶ್ರೀನು ನಿರ್ದೇಶನದ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು. ತಮನ್ ಸಂಗೀತ ಸಂಯೋಜಿಸಿರುವ ಈ ಚಿತ್ರವನ್ನು 14 ರೀಲ್ಸ್ ಪ್ಲಸ್ ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿದೆ. ರಾಮ್ ಅಚಂತ ಹಾಗೂ ಗೋಪಿಚಂದ್ ಅಚಂತ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಯ್ಯ ಅವರಿಗೆ ಜೋಡಿಯಾಗಿ ಸಂಯುಕ್ತಾ ಮೆನನ್‍ ನಟಿಸಿದ್ದು, ಆದಿ ಪಿನಿಸೆಟ್ಟಿ ಖಳನಾಯಕನಾಗಿ ನಟಿಸಿದ್ದಾರೆ.

Tags:
error: Content is protected !!