Mysore
29
scattered clouds

Social Media

ಶನಿವಾರ, 24 ಜನವರಿ 2026
Light
Dark

ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಸಿಗಲಿ: 101 ಈಡುಗಾಯಿ ಒಡೆದ ಅಭಿಮಾನಿಗಳು

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ.

ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಮಾಡಲಾಯಿತು.

101 ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ 101 ಈಡುಗಾಯಿ ಒಡೆದು ಡಿಸಿಎಂ ಡಿಕೆಶಿ ಸಿಎಂ ಆಗಲಿ ಎಂದು ಹರಕೆ ತೀರಿಸಲಾಯಿತು.

ಈ ವೇಳೆ ಸಂಘದ ಕಾರ್ಯಕರ್ತರು ಡಿಕೆಶಿ ಭಾವಚಿತ್ರ ಹಿಡಿದು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಲೇಬೇಕು ಎಂದು ಘೋಷಣೆ ಕೂಗಿದರು.

Tags:
error: Content is protected !!