Mysore
16
few clouds

Social Media

ಶನಿವಾರ, 24 ಜನವರಿ 2026
Light
Dark

ಇದು ರೆಬೆಲಿಯನ್‌ ಸಿದ್ದರಾಮಯ್ಯ ವರ್ಸಸ್‌ ಕಾಂಪ್ರಮೈಸ್‌ ಸಿದ್ದರಾಮಯ್ಯ ನಡುವಿನ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ

It’s been two and a half years without grants for MLAs: MP Basavaraj Bommai mocks

ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್‌ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ. ಕಾಂಪ್ರಮೈಸ್‌ ಸಿದ್ದರಾಮಯ್ಯ ಆದರೆ ಅಧಿಕಾರ ಬಿಟ್ಟುಕೊಡುತ್ತಾರೆ ಎಂದರು.

ಇದನ್ನು ಓದಿ: ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಆರ್.‌ಅಶೋಕ್‌ ವಾಗ್ದಾಳಿ

ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ತಮ್ಮ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಗಲಿದೆ. ನಾವು ನೋಡಿದ ಸಿದ್ದರಾಮಯ್ಯ ಮೊದಲಿನಿಂದಲೂ ರೆಬೆಲಿಯನ್‌. ಅವರದ್ದು ಯಾವಾಗಲೂ ಗಟ್ಟಿ ಗಡಸುತನದ ರಾಜಕಾರಣ. ಅದೇ ಮೂಲ ಸಿದ್ದರಾಮಯ್ಯ ಈಗ ಅಧಿಕಾರದ ಆಸೆಗಾಗಿ ಬದಲಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್‌ ಒಳಜಗಳದ ವಿಚಾರವಾಗಿ, ದೇಶದಲ್ಲಿ ಕಾಂಗ್ರೆಸ್‌ ಪಕ್ಷ ನಮ್ಮ ವಿರೋಧಿ ಅವರ ಸಿದ್ದಾಂತವನ್ನು ಬಿಜೆಪಿ ವಿರೋಧಿಸುತ್ತಾ ಬಂದಿದೆ. ದೇಶದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಇರಬೇಕು ಎಂಬುದು ನಮ್ಮ ನಿಲುವು ಎಂದರು.

Tags:
error: Content is protected !!