ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನವೆಂಬರ್.30ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಡಿಸೆಂಬರ್.1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಿರಣ್ ರಿಜಿಜು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಧಿವೇಶನ ಈ ದಿನಾಂಕಗಳಲ್ಲಿ ಕರೆಯುವ ಸರ್ಕಾರದ ಪ್ರಸ್ತಾವನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.
19 ದಿನಗಳ ಕಾಲ ಸಂಸತ್ ಅಧಿವೇಶನದಲ್ಲಿ 15 ದಿನಗಳಲ್ಲಿ ಕಲಾಪ ನಡೆಯಲಿದೆ. ಡಿಸೆಂಬರ್.5 ಹಾಗೂ 19ರಂದು ಖಾಸಗಿ ಸದಸ್ಯರ ಮಸೂದೆಗಳು ಮತ್ತು ಡಿಸೆಂಬರ್.12ರಂದು ಖಾಸಗಿ ಸದಸ್ಯರ ನಿರ್ಣಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.





