Mysore
28
clear sky

Social Media

ಮಂಗಳವಾರ, 20 ಜನವರಿ 2026
Light
Dark

ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವು ಪ್ರಕರಣ: ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲು

ಕಲಬುರ್ಗಿ: ಭೀಕರ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ವಾಹನ ಚಾಲನೆ ಎಂದು ಮಹಾಂತೇಶ್‌ ಸಂಬಂಧಿ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಅರೋಕಿಯಾ ಅಂಥೋನಿ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಇದನ್ನು ಓದಿ: ಕಾರು ಅಪಘಾತ : ಐಎಎಸ್‌ ಅಧಿಕಾರಿ ಮಹಾಂತೇಶ್‌ ದುರ್ಮರಣ 

ಕಲಬುರ್ಗಿ ಜಿಲ್ಲೆ ಜೇವರ್ಗಿ ಬೈಪಾಸ್‌ ಬಳಿ ಮಹಾಂತೇಶ್‌ ಬೀಳಗಿ ಅವರ ಕಾರು ಅಪಘಾತಕ್ಕೀಡಾಗಿದೆ. ಮಹಾಂತೇಶ್‌ ಬೀಳಗಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಐದು ಜನರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸಂಬಂಧ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!