Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ: ಸಿದ್ದಲಿಂಗಪುರದಲ್ಲಿ ಬೆಳ್ಳಿ ನಾಗಾಭರಣ ದರ್ಶನ

ಮೈಸೂರು: ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಇದನ್ನು  ಓದಿ: ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ

ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ದೇವಾಲಯದಲ್ಲಿ ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮೂಲ ದೇವರಿಗೆ ಮೈಸೂರಿನ ಅರಸರು ಕೊಡುಗೆಯಾಗಿ ನೀಡಿರುವ ಬೆಳ್ಳಿ ನಾಗಾಭರಣವನ್ನು ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಸುಬ್ರಹ್ಮಣ್ಯಸ್ವಾಮಿಯ ದರ್ಶನ ಪಡೆಯಲು ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಸಿದ್ದಲಿಂಗಪುರಕ್ಕೆ ಆಗಮಿಸಿದ್ದರು. ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.

Tags:
error: Content is protected !!