ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ಇದೀಗ ಎಲ್ಲೆಡೆ ಫುಲ್ ವೈರಲ್ ಆಗಿದೆ.
ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವೀಟ್ ಖಾತೆಯ ಮೂಲಕ ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದಾರೆ.
ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಅದು ಜಡ್ಜ್ ಆಗಿರಲಿ, ಅಧ್ಯಕ್ಷರಾಗಿರಲಿ ಯಾರೇ ಆಗಿರಲಿ ನನ್ನನ್ನು ಸೇರಿಸಿ ಸಹ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಕೊಟ್ಟ ಮಾತಿನ ಶಕ್ತಿಯೇ ವಿಶ್ವದ ಶಕ್ತಿಯಾಗಿದೆ ಎಂದು ಬರೆದುಕೊಂಡಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತಷ್ಟು ಕಾವು ಪಡೆದುಕೊಳ್ಳಲಿದೆ ಎನ್ನಲಾಗಿದೆ. ಇದು ಮುಂದಿನ ದಿನಗಳಲ್ಲಿ ಯಾವ ಮಟ್ಟಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.





