ಬೆಂಗಳೂರು: ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ, ಡಿಸಿಎಂ ಅವರನ್ನು ದೆಹಲಿಗೆ ಕರೆದು ಚರ್ಚೆ ನಡೆಸಿರುವುದಾಗಿ ಹೇಳಿದ್ದಾರೆ.
ಇದನ್ನು ಓದಿ: ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆ: ಏನದು ಗೊತ್ತಾ?
ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಪಾಲಿಸುತ್ತೇನೆ. ಅವರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ನನಗೆ ಕರೆ ಮಾಡಲಿ ನೋಡೋಣ. ದೆಹಲಿಗೆ ಕರೆದರೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದರು.




