ಮಡಿಕೇರಿ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಿ : ಶಾಸಕ ಜಿ.ಟಿ.ಡಿ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ.
ರಾಜ್ಯದ ಜನತೆ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲ್ಲಿ, ಆದ್ರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ.




