ಮೈಸೂರು ನಗರದ ದಟ್ಟಗಳ್ಳಿ ಜೋಡಿ ಬೇವಿನ ಮರ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತ ಕ್ಕೀಡಾಗುವಂತಾಗಿದೆ. ದಟ್ಟಗಳ್ಳಿ ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ರಸ್ತೆಗೆ ಡಾಂಬರೀಕರಣ ಮಾಡಲು ಶಾಸಕರು ಹಾಗೂ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎನ್.ಆರ್.ಮಲ್ಲಿಕಾರ್ಜುನ, ದಟ್ಟಗಳ್ಳಿ, ಮೈಸೂರು





