ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.
ಗ್ರಾಮದ ಭೈರೇಗೌಡ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದು, ಹುಲಿ ಸೆರೆಗೆ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ.
ಭೈರೇಗೌಡ ಎಂಬುವವರ ಜಮೀನಿನಲ್ಲಿ ದೊಡ್ಡ ಗಾತ್ರದ ಬೋನನ್ನು ಇರಿಸಲಾಗಿದ್ದು, ಅರಣ್ಯ ಸಿಬ್ಬಂದಿ ಅಕ್ಕಪಕ್ಕದ ಜಮೀನಿನಲ್ಲಿ ಮೊಕ್ಕಾಂ ಹೂಡಿದ್ದಾರೆ.
ಗ್ರಾಮದ ಸುತ್ತಮುತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಸಂಚರಿಸುತ್ತಿರುವುದರಿಂದ ಗ್ರಾಮಸ್ಥರಲ್ಲಿ ಕೊಂಚ ನೆಮ್ಮದಿ ದೊರಕಿದೆ ಎಂದು ರೈತರು ಹೇಳಿದ್ದಾರೆ.





