Mysore
29
clear sky

Social Media

ಗುರುವಾರ, 29 ಜನವರಿ 2026
Light
Dark

ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ

ಪಾಂಡವಪುರ : ಮನೆಗೆ ಆಕಸ್ಮಿಕ ಬೆಂಕಿ ಬಿದ್ದು, ದಿನಬಳಕೆ ವಸ್ತುಗಳು ಸೇರಿದಂತೆ ಲಕ್ಷಾಂತರ ರೂ. ಬೆಲೆ ಬಾಳುವ ಮರದ ಸಾಮಗ್ರಿಗಳು ಸುಟು ಕರಕಲಾಗಿರುವ ಘಟನೆ ತಾಲ್ಲೂಕಿನ ಕನಗನಮರಡಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗ್ರಾಮದ ಪದ್ಮಮ್ಮ ಚಂದ್ರೇಗೌಡ ಎಂಬವರಿಗೆ ಸೇರಿದ ಮನೆ ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿದೆ. ಪದ್ಮಮ್ಮ ಅವರು ಹೊಸ ಮನೆ ನಿರ್ಮಾಣ ಮಾಡುತ್ತಿದ್ದು, ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯಿಂದ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಭಸ್ಮವಾಗಿದೆ. ದಿನ ಬಳಕೆ ವಸ್ತುಗಳು, ಸಾಮಗ್ರಿಗಳು ಸೇರಿದಂತೆ ಹೊಸ ಮನೆ ನಿರ್ಮಾಣಕ್ಕೆಂದು ಇಟ್ಟಿದ್ದ ಮರದ ಸಾಮಗ್ರಿಗಳು ಸಹ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ಮೌಲ್ಯ ನಷ್ಟವಾಗಗಿದೆ.

ಇದನ್ನು ಓದಿ: ಕುರುಬ ಸಮಾಜ ಒಟ್ಟಾಗಿ, ಸಮುದಾಯದ ನಾಯಕರನ್ನು ಉಳಿಸಿಕೊಳ್ಳಿ : ಯತೀಂದ್ರ ಸಿದ್ದರಾಮಯ್ಯ ಕರೆ

ವಿಷಯ ತಿಳಿದ ಅಗ್ನಿ ಶಾಮಕದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಗ್ರಾಪಂ ಸದಸ್ಯ ಹೆಗ್ಗಡಹಳ್ಳಿ ಎಚ್.ಜೆ.ರಾಮಕೃಷ್ಣ ಅವರು ಭೇಟಿ ನೀಡಿ, ಪರಿಶೀಲಿಸಿ, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.

ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಪದ್ಮಮ್ಮ ಅವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Tags:
error: Content is protected !!