Mysore
36
few clouds

Social Media

ಶನಿವಾರ, 18 ಏಪ್ರಿಲ 2026
Light
Dark

ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ: ದೆಹಲಿ ಭೇಟಿ ಬಗ್ಗೆ ಡಿಸಿಎಂ ಡಿಕೆಶಿ ಹೇಳಿಕೆ

ಬೆಂಗಳೂರು: ದೆಹಲಿ ಪ್ರವಾಸ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆ ಹೊರತಾಗಿ ಹೈಕಮಾಂಡ್‌ ನಾಯಕರ ಭೇಟಿ ಬಗ್ಗೆ ನಾನು ಸಿಎಂ ಸಿದ್ದರಾಮಯ್ಯನವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ ಚರ್ಚೆ ನಡೆಸುತ್ತೇನೆ. ಬಳಿಕ ನಿರ್ಧರಿಸುವುದಾಗಿ ತಿಳಿಸಿದರು.

ಇದನ್ನು ಓದಿ: ದಿತ್ವಾ ಚಂಡಮಾರುತ ಎಫೆಕ್ಟ್:‌ ಮೂರು ರಾಜ್ಯಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕುವವನೂ ಅಲ್ಲ. ನಾನು ಯಾವುದೇ ಶಾಸಕರನ್ನು ಕರೆದುಕೊಂಡು ದೆಹಲಿಗೆ ಹೋಗಿಲ್ಲ. ಹೋಗವೇಕು ಎಂದರೆ ನೂರು ಶಾಸಕರನ್ನು ಒಟ್ಟಿಗೆ ಕರೆದುಕೊಂಡು ಹೋಗಬಹುದಿತ್ತು. ಅದೇನೂ ನನಗೆ ದೊಡ್ಡದಲ್ಲ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. 2028ರಲ್ಲಿಯೂ ಕಾಂಗ್ರೆಸ್ ಸರ್ಕಾರ ತರುವುದೇ ನಮ್ಮ ಗುರಿ ಎಂದು ಹೇಳಿದರು.

Tags:
error: Content is protected !!