Mysore
21
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಮಂಡ್ಯ| ಮಾರಕಾಸ್ತ್ರಗಳಿಂದ ಥಳಿಸಿ ರೌಡಿಶೀಟರ್‌ ಬರ್ಬರ ಹತ್ಯೆ

Father-in-law murdered by son-in-law: Wife and aunt-in-law arrested for aiding the murder.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅಮೃತಿ ಸಮೀಪ ನಡೆದಿದೆ.

ಲಕ್ಷ್ಮೀಸಾಗರ ಗ್ರಾಮದ ರೌಡಿಶೀಟರ್‌ ಮಹೇಶ್‌ ಎಂಬಾತನನ್ನು ಕೊಲೆ ಮಾಡಲಾಗಿದೆ. ಹಲವು ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮಹೇಶ್‌ನನ್ನು ಗಡಿಪಾರು ಮಾಡಲು ಪೊಲೀಸರು ನಿರ್ಧರಿಸಿದ್ದರು.

ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ಮಹೇಶ್‌ ಕೆಲಸ ಮಾಡುತ್ತಿದ್ದ. ಎರಡು ದಿನದ ಹಿಂದೆ ಬೆಂಗಳೂರಿನಿಂದ ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ.

ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಹೋಗುವಾಗ ಮಹೇಶ್‌ ಹತ್ಯೆ ಮಾಡಲಾಗಿದೆ. ರೌಡಿಶೀಟರ್‌ ಮಹೇಶ್‌ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಮೇಲುಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!