ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.
ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎಸ್.ಮುದಗಲ್ ಮತ್ತು ಟಿ.ವೆಂಕಟೇಶ್ ನಾಯಕ್ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆದಿದೆ. ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಬೇಕು ಎಂದು ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದಾರೆ. ಪ್ರಜ್ವಲ್ ೨೦೨೪ ಏಪ್ರಿಲ್ ೨೪ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಪ್ರಜ್ವಲ್ ವಿರುದ್ದ ಏಪ್ರಿಲ್ ೨೮ರಂದು ಪ್ರಕರಣ ದಾಖಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ:-ದಿಲ್ಲಿ ಕಾರು ಸ್ಛೋಟ ಪ್ರಕರಣ : ಉ.ಪ್ರ. ಜಮ್ಮು-ಕಾಶ್ಮೀರ ಸೇರಿ ಹಲವೆಡೆ ಎನ್‌ಐಎ ದಾಳಿ
ನನ್ನ ಕಕ್ಷಿದಾರ ದೇಶ ತೊರೆಯುವುದಿಲ್ಲ
ಐಪಿಸಿ ಸೆಕ್ಷನ್ ೨೦೧ರ ಅಡಿ ಸಾಕ್ಷ್ಯ ನಾಶಪಡಿಸಿರುವುದಕ್ಕೆ ಪ್ರೊ. ರವಿವರ್ಮ ಕುಮಾರ್ ಅವರು ಪ್ರಾಸಿಕ್ಯೂಟ್ ಮಾಡಿದ್ದಾರೆಯೇ ಜಿಯೊ ಮ್ಯಾಪ್ ಅನ್ನು ವಿಚಾರಣಾಧೀನ ನ್ಯಾಯಾಧಿಶರು ಪರಿಗಣಿಸಿದ್ದಾರೆ. ಇದನ್ನು ಹೊರತುಪಡಿಸಿ ಇನ್ನೂ ಮೂರು ಪ್ರಕರಣಗಳು ನನ್ನ ಕ್ಷಕಿದಾರ ವಿರುದ್ಧ ಇವೆ. ಯಾವುದೇ ರೀತಿಯಲ್ಲೂ ನನ್ನ ಕಕ್ಷಿದಾರ ದೇಶ ತೊರೆಯುವುದಿಲ್ಲ ಎಂದು ಪ್ರಜ್ವಲ್ ಪರ ವಕೀಲರು ವಾದಿಸಿದರು.
ಬುಧವಾರಕ್ಕೆ ವಿಚಾರಣೆ ಮುಂದೂಡಿಕೆ
ವಾದ-ಪ್ರತಿವಾದ ಆಲಿಸಿದ ನ್ಯಾಯಾಧಿಶರು ವಿಚಾರಣೆಯನ್ನ ಡಿಸೆಂಬರ್ 3ಕ್ಕೆ ಬುಧವಾರಕ್ಕೆ ಮುಂದೂಡಿಕೆ ಮಾಡಿದ್ದಾರೆ.





