Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ ಆಗುತ್ತಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು. ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರದ್ದು ಒಂದೇ ಸಿದ್ಧಾಂತ. 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳಿಕ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್‌ ಹೇಳಿದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಹೇಳಿದರು.

ಈ ಮೂಲಕ ಕುರ್ಚಿ ಕದನ ವಿಚಾರವನ್ನು ಸಿಎಂ ಹಾಗೂ ಡಿಸಿಎಂ ಹೈಕಮಾಂಡ್‌ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದಾರೆ.

Tags:
error: Content is protected !!