Mysore
24
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನ್ನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.

Tags:
error: Content is protected !!