ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಶಾಸಕ ಹರೀಶ್ ಗೌಡ, ಗಾವಡಗೆರೆ ಶ್ರೀಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ರಂಗನಾಥ ಬಡಾವಣೆಯಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು.
ಇದನ್ನು ಓದಿ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕಜಾತ್ರೆ
ಶ್ರೀ ಆಂಜನೇಯಸ್ವಾಮಿ, ಭಜರಂಗಿ, ರಾಮ-ಲಕ್ಷ್ಮಣ-ಸೀತೆ, ದತ್ತಾತ್ರೇಯ ಮೂರ್ತಿಗಳ ಮೆರವಣಿಗೆ ನಡೆಯಿತು.
ಟ್ರ್ಯಾಕ್ಟರ್‌ಗಳಲ್ಲಿ ಉತ್ಸವ ಮೂರ್ತಿಗಳನ್ನು ಇಟ್ಟು ಶೋಭಯಾತ್ರೆ ನಡೆಸಲಾಯಿತು. ಕೇಸರಿ ಟೀ ಶರ್ಟ್, ಶಾಲು ತೊಟ್ಟು ಗುಂಪು ಗುಂಪಾಗಿ ಮೆರವಣಿಗೆಯಲ್ಲಿ ಭಕ್ತರು ಸಾಗಿದರು.
ಭಕ್ತರಿಗೆ ರಸ್ತೆಯುದ್ದಕ್ಕೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.





