Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ

ಟಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಬಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಡ್ಡಪುರ, ಜಯಪುರ, ಹೊಸಕುಕ್ಕೂರು, ವಿಜಾಪುರ, ಬಣವೆ, ಕಲಿಯೂರು ಸೇರಿದಂತೆ ಹೆಮ್ಮಿಗೆ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ 200 ಕೋಟಿ ಮಂಜೂರಾಗಿದೆ. ವಿವಿಧ ಕಾಮಗಾರಿಗಳಲ್ಲಿ ಪ್ರಾರಂಭಿಕವಾಗಿ ಕಲಿಯೂರು, ದೊಡ್ಡಪುರ ಸೇರಿದಂತೆ ಅದಕ್ಕೆ ಪೂರಕವಾದಂತೆ 50 ಕೋಟಿ ರೂಗಳ ವೆಚ್ಚದ ರಸ್ತೆ ಹಾಗೂ ಚರಂಡಿ ಸಮುದಾಯ ಭವನಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

Tags:
error: Content is protected !!