ಮಂಡ್ಯ: ನಾಳೆ ಕೃಷಿ ಮೇಳ ಉದ್ಘಾಟನೆಗೆಂದು ಮಂಡ್ಯ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು.
ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್‌ನಿಂದ ವಿ.ಸಿ.ಫಾರಂಗೆ ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ವಿ.ಸಿ.ಫಾರಂಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕೃಷಿ ಮೇಳ ನಡೆಯಲಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು.
ಕೃಷಿ ಮೇಳದ ಮಳಿಗೆಗಳು, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಆಹಾರ ವ್ಯವಸ್ಥೆ, ವೇದಿಕೆಯ ವ್ಯವಸ್ಥೆ ಸೇರಿದಂತೆ ಮುಂತಾದವುಗಳ ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕರಾದ ತಿಮ್ಮಯ್ಯ, ಗಂಗಾಧರ ಮತ್ತು ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.





