Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

dinesh gundurao

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ರೇಸ್‌ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ನನ್ನನ್ನು ಯಾಕೆ ಎಳೆದು ತರುತ್ತಿದ್ದೀರಾ? ನನಗೆ ಆಸೆ ಇದೆ. ಆದರೆ ಸಮಯ ಸಂದರ್ಭ ಎಲ್ಲವನ್ನೂ ಕೂಡ ಡಿಸೈಡ್‌ ಮಾಡುತ್ತದೆ. ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನವೇ ಅಂತಿಮ. ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದರು.

Tags:
error: Content is protected !!