ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು.
ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಉತ್ತಮ ವೇದಿಕೆಯಾಗಿದೆ. ಅಲ್ಲದೇ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕವಾಗಿ ಬೆಳವಣಿಗೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಬರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಖೋ ಖೋ ಆಟಗಾರ್ತಿ ಎಸ್.ಎಲ್.ಅಮೃತ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ನಾಗಮ್ಮ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.




