Mysore
29
few clouds

Social Media

ಮಂಗಳವಾರ, 27 ಜನವರಿ 2026
Light
Dark

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ವಿಜಯನಗರ ಮೂರನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಪಹರಿಸಲಾಗಿದೆ.

ಟಾಟಾ ಸುಮೋ ವಾಹನದಲ್ಲಿ ಬಂದ ಐದಾರು ಮಂದಿ, ಆ ವ್ಯಕ್ತಿ ಕಣ್ಣಿಗೆ ಕಾರದಪುಡಿ ಎರಚಿ, ಮನಸ್ಸೋ ಇಚ್ಛೆ ಥಳಿಸಿ, ಅಪಹರಣ ಮಾಡಿದ್ದಾರೆ.

ಆ ವ್ಯಕ್ತಿ ಜೋರಾಗಿ ಕಿರುಚುತ್ತಾ, ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಿಲ್ಲ. ರಸ್ತೆಯಲ್ಲಿ ನಿಂತಿದ್ದ ಜನರು ವ್ಯಕ್ತಿಯನ್ನು ರಕ್ಷಣೆ ಮಾಡಲು ಧಾವಿಸುವ ಧೈರ್ಯ ಮಾಡಿಲ್ಲ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವಿಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸಾರ್ವಜನಿಕರಿಂದ ಮಾಹಿತಿ ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags:
error: Content is protected !!