Mysore
25
light rain

Social Media

ಸೋಮವಾರ, 26 ಜನವರಿ 2026
Light
Dark

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪವನ್‌ ಕಲ್ಯಾಣ್‌, ಬಳಿಕ ಉಡುಪಿಗೆ ಆಗಮಿಸಿದ್ದು, ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆದರು.

ಬಳಿಕ ಸಂಜೆ 4 ಗಂಟೆ ಸಮಯದಲ್ಲಿ ಶ್ರೀಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಅದಾದ ಬಳಿಕ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ ಆಯೋಜಿಸಿರುವ ಲಕ್ಷ ಕಂಠ ಗೀತಾ ಪಾರಾಯಣ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾದರು.

ನವೆಂಬರ್.‌28ರಂದು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಇಂದು ಗೀತೋತ್ಸವ ಸಮಾರೋಪದಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಭಾಗವಹಿಸಿರುವುದು ವಿಶೇಷವಾಗಿತ್ತು.

Tags:
error: Content is protected !!