Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಚನ್ನೇಗೌಡ, ಸರೋಜಮ್ಮ ಹಾಗೂ ಜಯಮ್ಮ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಚಿಕ್ಕಮಗಳೂರು ಮೂಲದವರಾಗಿದ್ದರು. ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.

Tags:
error: Content is protected !!