Mysore
25
haze

Social Media

ಬುಧವಾರ, 28 ಜನವರಿ 2026
Light
Dark

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

Assembly Session

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ.

ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ 10 ದಿನಗಳ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯುವುದು ಖಚಿತವಾಗಿದೆ.

ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸಜ್ಜಾಗಿದೆ.

Tags:
error: Content is protected !!