Mysore
21
few clouds

Social Media

ಶನಿವಾರ, 24 ಜನವರಿ 2026
Light
Dark

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

dinesh gundurao

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ ಎಂದು ತಿಳಿಸಿದರು.

ಇದನ್ನು ಓದಿ: ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಈ ಬಗ್ಗೆ ದೂರುಗಳು ಬಂದಲ್ಲಿ ನಿಯಮ ಉಲ್ಲಂಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಽನಿಯಮದ ಸೆಕ್ಷನ್ ೧೫ ಉಪಬಂಧ ೧ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ. ಅಽನಿಯಮದ ಸೆಕ್ಷನ್ ೧೫ ಉಪಬಂಧ ೧ರನ್ವಯ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

Tags:
error: Content is protected !!