ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಸಂಜೆ 5.55 ಕ್ಕೆ ಸೂರ್ಯಾಸ್ತವಾಗುವ ನಿರೀಕ್ಷೆಯಿದೆ. ಆರ್ದ್ರತೆಯು ಸುಮಾರು 49 ಪ್ರತಿಶತದಷ್ಟು ಇರುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದೆ ಇತರೆಡೆ ಒಣಹವೆ
ಹವಾಮಾನ ಇಲಾಖೆ ಮೂಲವನ್ನು ಉಲ್ಲೇಖಿಸಿ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಕ್ಸ್‌ನಲ್ಲಿನ ಹವಾಮಾನ ವರದಿಯನ್ನು ಹಂಚಿಕೊಂಡಿದ್ದು, ರಾಜ್ಯದಾದ್ಯಂತ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ, ಬೆಳಿಗ್ಗೆ ಮಂಜು ಕವಿದ ವಾತಾವರಣವಿರುತ್ತದೆ ಎಂದು ಹೇಳಿದೆ.





