ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್
ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಖಾಸಗಿ ಕಂಪನಿಯ ಮಾಲೀಕ ಮುರಳಿಧರ್ ಎಂಬುವರ ಮೇಲೆ ನೊಂದ ಮಹಿಳಾ ಉದ್ಯೋಗಿ ಪ್ರಕರಣ ದಾಖಲಿಸಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆತ ಮಹಿಳೆಯರಿಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಮಹಿಳೆಯರಿಗೆ ಮೊಬೈಲ್‌ನಿಂದ ಮೆಸೇಜ್ ಮಾಡುತ್ತಿದ್ದರು ಎಂಬ ಆರೋಪವಿದೆ. ಇದರಿಂದ ನೊಂದ ಉದ್ಯೋಗಿ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಾರೆ.
ಹೀಗಿದ್ದೂ ಬಿಡದ ಮಾಲೀಕ ಮುರಳಿಧರ್ ಮಹಿಳೆ ಹಿಂದೆ ಬಿದ್ದಿದ್ದಾನೆ. ಮನೆಗೆ ಬಂದು ಕೆಲಸಕ್ಕೆ ಹಿಂದಿರುಗುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಬಗ್ಗೆ ಅಪಪ್ರಚಾರ ಮಾಡುವುದಾಗಿ ಹೆದರಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿರುವ ನೊಂದ ಮಹಿಳಾ ಉದ್ಯೋಗಿ ಮಾಲೀಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.





