Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸಲು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ಇದನ್ನು ಓದಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಪ್ರಜ್ವಲ್‌ ರೇವಣ್ಣ ಅರ್ಜಿಯನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠ ತಿರಸ್ಕರಿಸಿದೆ. ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ, ಕೆಳ ನ್ಯಾಯಾಲಯದ ಜಡ್ಜ್‌ ಅವರ ಅಭಿಪ್ರಾಯಗಳು, ಪೂರ್ವಾಗ್ರಹಪೀಡಿತರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಧಾರ ಇಲ್ಲ ಎಂದು ಹೇಳಿದೆ.

ಪ್ರಸ್ತುತ ಕೇಸ್‌ನಲ್ಲಿ ಹಾಜರುಪಡಿಸುವ ಸಾಕ್ಷ್ಯಗಳ ಆಧಾರದ ಮೇಲೆ ಜಡ್ಜ್‌ ತೀರ್ಪು ನೀಡಬೇಕೇ ವಿನಃ ಹಿಂದಿನ ಕೇಸ್‌ ತೀರ್ಪು ಆಧಾರದ ಮೇಲೆ ಅಲ್ಲ ಎಂದು ಹೇಳಿ, ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.

Tags:
error: Content is protected !!