Mysore
28
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

dinesh gundurao

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 45 ಹೊಸ ತಾಲ್ಲೂಕುಗಳಿದ್ದು, ಸದ್ಯಕ್ಕೆ ಅಲ್ಲಿ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳ ಅಗತ್ಯತೆ, ಬೇಡಿಕೆಗಳನ್ನು ಪರಿಶೀಲನೆ ಮಾಡಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ವೈಜ್ಞಾನಿಕವಾಗಿ ಸಮಿತಿ ವರದಿ ಆಧರಿಸಿ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗುತ್ತದೆ. ಇದಕ್ಕಾಗಿ ೮೫೦ ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದರು.

ಇದನ್ನು ಓದಿಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ 

ಶಿರಹಟ್ಟಿಯಲ್ಲಿ ೧.೫೩ ಲಕ್ಷ ಜನಸಂಖ್ಯೆಯಿದ್ದು, ಈಗಾಗಲೇ ಒಂದು ಸಮುದಾಯ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಮತ್ತೊಂದು ಸಿಎಚ್‌ಸಿ ಮಂಜುರಾತಿ ಮಾಡಲು ಮಾರ್ಗಸೂಚಿ ಪ್ರಕಾರ ಅವಕಾಶವಿಲ್ಲ. ಸಮಿತಿ ವರದಿ ಆಧರಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಸ್ಪತ್ರೆಗಳ ಕೊರತೆ ನೀಗಿಸಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಡಾ.ಚಂದ್ರ ಲಮಾಣಿ ಅವರು, ಶಿರಹಟ್ಟಿ ತಾಲ್ಲೂಕು ಕೇಂದ್ರವಾಗಿದ್ದು, ಅಲ್ಲಿ ತಾಲ್ಲೂಕು ಆಸ್ಪತ್ರೆಯಾಗಬೇಕು ಹಾಗೂ ಹೊಸ ಆರೋಗ್ಯ ಸಮುದಾಯ ಕೇಂದ್ರ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಶಾಸಕ ಐಹೊಳೆ ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, ರಾಯಭಾಗದಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಿದ್ದು, ಅಲ್ಲಿ ಕೊರತೆಯಿರುವ ತಜ್ಞವೈದ್ಯರನ್ನು ಜನವರಿ ತಿಂಗಳೊಳಗೆ ಒದಗಿಸಲಾಗುವುದು, ನಂತರ ತಾಯಿ, ಮಕ್ಕಳ ಆಸ್ಪತ್ರೆಯ ಬಗ್ಗೆ ಪರಿಶೀಲಿಸೋಣ ಎಂದು ಹೇಳಿದರು.

Tags:
error: Content is protected !!