Mysore
22
broken clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಚರಂಡಿಗಳಲ್ಲಿ ತುಂಬಿಕೊಂಡಿರುವ ತ್ಯಾಜ್ಯಗಳನ್ನು ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ.

ಇದನ್ನು ಓದಿ: ಮೈಸೂರು ಮುಡಾ ಹಗರಣ: ಅಕ್ರಮ ನಿವೇಶನ ಹಂಚಿಕೆಗೆ 22.47 ಕೋಟಿ ಲಂಚ ಪಡೆದಿದ್ದ ದಿನೇಶ್‌ ಕುಮಾರ್‌

ಈ ಬಗ್ಗೆ ಮಾತನಾಡಿರುವ ಗ್ರಾಮಸ್ಥರು, ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಕಸ ಕಡ್ಡಿಗಳಿಂದ ಕೊಳಚೆ ನೀರಿನಿಂದ ತುಂಬಿ ದುರ್ನಾತ ಬೀರುತ್ತಿವೆ. ಕಳೆದ ನಾಲ್ಕು ತಿಂಗಳಿಂದ ದೊಡ್ಡ ಕವಲಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮತ್ತು ಚರಂಡಿಯನ್ನು ಸ್ವಚ್ಛತೆ ಮಾಡಿಲ್ಲ. ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ದೊಡ್ಡಕವಲಂದೆ, ಗಟ್ಟವಾಡಿ, ಗಟ್ಟವಾಡಿಪುರ, ಹರಗನಪುರ, ಹೆಳವರಹುಂಡಿ, ಕೃಷ್ಣಾರಾಜಪುರ ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸದೆ ಚರಂಡಿಗಳೆಲ್ಲವೂ ತುಂಬಿ ತುಳುಕುತ್ತಿವೆ. ಆದ್ದರಿಂದ ನಾವೆಲ್ಲಾ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags:
error: Content is protected !!