Mysore
28
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿರುವ ವೈಷ್ಣವ್, ಡಿಜಿಟಲ್ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಎರಡು ಹಂತಗಳಲ್ಲಿ ಜನಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ.

೨೦೨೬ರ ಏಪ್ರಿಲ್‌ನಿಂದ ಸೆಪ್ಟೆಂಬರ್ ಅವಽಯಲ್ಲಿ ನಡೆಯುವ ಮೊದಲ ಹಂತದ ವೇಳೆ ಮನೆಗಳ ಗಣತಿ ಮಾಡಲಾಗುವುದು. ೨೦೨೭ರ ಫೆಬ್ರುವರಿಯಲ್ಲಿ ಜನರ ಗಣತಿ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

೨೦೨೭ರ ಜನಗಣತಿಯು ಮೊದಲ ಡಿಜಿಟಲ್ ಗಣತಿಯಾಗಲಿದೆ. ದತ್ತಾಂಶ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಜನಗಣತಿ ಪ್ರಕ್ರಿಯೆಯ ಡಿಜಿಟಲ್ ವಿನ್ಯಾಸವನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಜನಗಣತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಅಗತ್ಯವಾಗಿರುವ ಅಧಿಕಾರಿಗಳ ನೇಮಕಾತಿಯನ್ನು ಜ.೧೫ರೊಳಗೆ ಪೂರ್ಣಗೊಳಿಸಬೇಕು ಎಂದು ಭಾರತೀಯ ನೋಂದಣಿಯ ಮಹಾನಿರ್ದೇಶನಾಲಯವು (ಆರ್‌ಜಿಐ) ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಿತ್ತು.

Tags:
error: Content is protected !!