Mysore
20
scattered clouds

Social Media

ಬುಧವಾರ, 11 ಮಾರ್ಚ್ 2026
Light
Dark

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು ಇಂಡಿಗೋ ವಿಮಾನದಲ್ಲೇ ಸಿಲುಕಿದ್ದ ಘಟನೆ ನಡೆದಿದೆ.

ಶಾಸಕರ ವಿಮಾನ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಹೊರಡಬೇಕಿತ್ತು. ವಿಮಾನದ ಒಳಗಡೆ ಕುಳಿತುಕೊಂಡ ಬಳಿಕ ದಟ್ಟವಾದ ಹೊಗೆಯಿಂದಾಗಿ ವಿಮಾನ ಟೇಕಾಫ್ ಆಗಲಿಲ್ಲ. ಸುಮಾರು 4 ಗಂಟೆಯಿಂದ ಶಾಸಕರು ವಿಮಾನದಲ್ಲೇ ಕುಳಿತ್ತಿದ್ದರು. ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕಾಫ್ ಅಗಿಲ್ಲ. ವಿಮಾನ ಎಷ್ಟು ಗಂಟೆಗೆ ಟೇಕಾಫ್ ಆಗಲಿದೆ ಎಂಬ ಮಾಹಿತಿಯನ್ನು ಸಿಬ್ಬಂದಿ ನೀಡಿಲ್ಲ. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನಗಳ ಟೇಕಾಫ್ ಮತ್ತು ಲ್ಯಾಂಡಿಂಗ್‍ಗೆ ಸಮಸ್ಯೆಯಾಗಿದೆ.

ಮಾಹಿತಿಯ ಪ್ರಕಾರ, ಈ ವಿಮಾನ ಬೆಳಗ್ಗೆ 5.30ಕ್ಕೆ ದೆಹಲಿಯಿಂದ ಟೇಕ್‍ಆಫ್ ಆಗಬೇಕಿತ್ತು. ಆದರೆ ವಿಮಾನದಲ್ಲಿ ಪ್ರಯಾಣಿಕರು ಕುಳಿತ ನಂತರವೇ ದೆಹಲಿಯಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದ್ದು, ಇದರಿಂದ ವಿಮಾನ ಹಾರಾಟಕ್ಕೆ ಅನುಮತಿ ಲಭ್ಯವಾಗಿಲ್ಲ. ಪರಿಣಾಮವಾಗಿ, ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕ್‍ಆಫ್ ಆಗಲಿಲ್ಲ.

ಇದನ್ನು ಓದಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಸುಮಾರು ನಾಲ್ಕು ಗಂಟೆಗಳಿಗಿಂತ ಹೆಚ್ಚು ಕಾಲ ಶಾಸಕರು ಮತ್ತು ಸಚಿವರು ವಿಮಾನದಲ್ಲೇ ಕುಳಿತು ಕಾಯುವಂತಾಯಿತು. ವಿಮಾನ ಸಿಬ್ಬಂದಿಯಿಂದ ಸ್ಪಷ್ಟ ಮಾಹಿತಿಯ ಕೊರತೆಯೂ ಅಸಮಾಧಾನಕ್ಕೆ ಕಾರಣವಾಗಿದೆ. “ವಿಮಾನ ಯಾವಾಗ ಟೇಕ್‍ಆಫ್ ಆಗುತ್ತದೆ ಎಂಬುದರ ಬಗ್ಗೆ ಸಿಬ್ಬಂದಿ ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ” ಎಂದು ಕೆಲ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಉಂಟಾದ ತೀವ್ರ ಹವಾಮಾನ ವೈಪರೀತ್ಯ ಮತ್ತು ದಟ್ಟ ಹೊಗೆಯ ಪರಿಣಾಮವಾಗಿ ಹಲವಾರು ವಿಮಾನಗಳ ಟೇಕ್‍ಆಫ್ ಹಾಗೂ ಲ್ಯಾಂಡಿಂಗ್ ಕಾರ್ಯಾಚರಣೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ದೆಹಲಿಯಿಂದ ವಿವಿಧ ನಗರಗಳಿಗೆ ಹೊರಡುವ ಮತ್ತು ಆಗಮಿಸುವ ವಿಮಾನಗಳು ವಿಳಂಬವಾಗಿವೆ.

ವಿಮಾನದಲ್ಲಿ ಸಿಲುಕಿದ್ದವರು
ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‍ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಕೆಜೆ ಜಾರ್ಜ್. ಸೇರಿದಂತೆ ಶಾಸಕರು ಮತ್ತು ಸಚಿವರು ವಿಮಾನದಲ್ಲೇ ಸಿಲುಕಿದ್ದರು.

Tags:
error: Content is protected !!