Mysore
26
overcast clouds

Social Media

ಶನಿವಾರ, 13 ಜೂನ್ 2026
Light
Dark

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ 32 ಲಕ್ಷ ರೈತರಿಗೆ ಬೆಳೆ ಬೆಳೆಯಲು 24 ಸಾವಿರ ಕೋಟಿ ಹಣ ನೀಡಲು ಘೋಷಿಸಿದ್ದರು ಆದರೆ ನವೆಂಬರ್‌ವರೆಗೂ 12 ಸಾವಿರ ಕೋಟಿ ಹಣ ಮಾತ್ರ ಬಿಡುಗಡೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲು ಜನವರಿ 20ರ ನಂತರ ತೀರ್ಮಾನ ಕೈಗೊಳ್ಳಲಿದ್ದೇವೆ. ಸೂಕ್ತ ಕಾಲದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ದಾಖಲೆ ಬಿಡುಗಡೆಗೊಳಿಸುತ್ತೇನೆ ಎಂದರು.

Tags:
error: Content is protected !!