Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಎಂದು ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೂ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ ಆಗುತ್ತಿದೆಯಾ ಇಲ್ಲವಾ ಎಂದು ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

Tags:
error: Content is protected !!