Mysore
21
broken clouds

Social Media

ಮಂಗಳವಾರ, 07 ಜುಲೈ 2026
Light
Dark

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಚರ್ಚೆ ಸ್ಟ್ರೀಟ್‌ನಲ್ಲಿರುವ ಬ್ಯಾಸ್ಟಿಯನ್‌ ಪಬ್‌ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಅತಿ ದುಬಾರಿ ಪಬ್‌ ಎಂಬ ಖ್ಯಾತಿ ಪಡೆದಿರುವ ಬ್ಯಾಸ್ಟಿಯನ್‌ ಪಬ್‌ ಮೇಲೆ ದಾಳಿ ನಡೆಸಲಾಗಿದೆ.

ಇದನ್ನು ಓದಿ: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಯಾವ ಕಾರಣಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಇತ್ತೀಚೆಗೆ ಐಟಿ ಅಧಿಕಾರಿಗಳು ಕೂಡ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ನಿವಾಸ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಇದರ ಮುಂದುವರಿದ ಭಾಗವಾಗಿ ಇಂದು ಬೆಂಗಳೂರಿನ ಪಬ್‌ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!