Mysore
20
overcast clouds

Social Media

ಶುಕ್ರವಾರ, 02 ಜನವರಿ 2026
Light
Dark

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

B.Y Vijayendra

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಸಿಎಂ ಸಿದ್ದರಾಮಯ್ಯನವರ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಸಿಎಂ ಮಾತಿನ ದಾಟಿ ನೋಡಿದರೆ ನಿಮಗೆ ಅರ್ಥವಾಗುತ್ತದೆ. ಸದನದಲ್ಲಿ ಚರ್ಚಿಸುವುದಕ್ಕೆ ಔಟ್‌ ಗೋಯಿಂಗ್‌ ಮುಖ್ಯಮಂತ್ರಿಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಆಶಾಭಾವನೆ ಇಲ್ಲ ಎಂದು ಹೇಳಿದರು.

ಇದನ್ನು ಓದಿ: ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ನೀವು ಸಿಎಂ ಆಗಿ ಎಷ್ಟು ದಿನ ಇರುತ್ತೀರಾ ಅನ್ನುವುದು ಮುಖ್ಯವಲ್ಲ. ಆ ಸ್ಥಾನದಲ್ಲಿದ್ದು, ರಾಜ್ಯಕ್ಕೆ ಏನು ಕೆಲಸ ಮಾಡಿದ್ದೀರಿ? ಎಂಬುದು ಮುಖ್ಯ. ಸಿದ್ದರಾಮಯ್ಯನವರ ಕೊನೆಯ ಅಧಿವೇಶನದಲ್ಲಾದರೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ ಎಂದು ಹೇಳಿದರು.

ಕಳೆದ ಎರಡೂವರೆ ವರ್ಷಗಳಿಂದ ಏನೂ ಮಾಡದೇ ಇರೋರು ಇನ್ನೆರಡು ವಾರದಲ್ಲಿ ಏನು ಮಾಡ್ತಾರೆ? ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!