Mysore
26
overcast clouds

Social Media

ಮಂಗಳವಾರ, 26 ಮೇ 2026
Light
Dark

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ

ಶಿವಮೂರ್ತಿ ಎಂಬುವವರೇ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಲ್ಲಿಪಾಳ್ಯದಿಂದ ತಮಿಳುನಾಡು ರಾಜ್ಯದ ಮಾಕನಪಾಳ್ಯ ಗ್ರಾಮಕ್ಕೆ ಬೈಕಿನಲ್ಲಿ ಹೋಗುವ ವೇಳೆ ಕಾಡಾನೆ ದಾಳಿ ಮಾಡಿದೆ.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!