Mysore
21
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ಓದುಗರ ಪತ್ರ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಕೆಲ ರಾಜಕೀಯ ಪಕ್ಷಗಳ ನಾಯಕರ ಜನುಮದಿನದ ಪ್ರಯುಕ್ತ ಬೃಹತ್ ಗಾತ್ರದ ಬ್ಯಾನರ್‌ಗಳನ್ನು ಅಳವಡಿಸಿದ್ದು, ಜನುಮದಿನ ಕಳೆದು ಒಂದು ವಾರ, ಹದಿನೈದು ದಿನ,ಗಳಾದರೂ ತೆರವುಗೊಳಿಸದೆ ಹಾಗೆಯೇ ಬಿಡಲಾಗಿದೆ.

ಇದರಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಕ್ರಮಗಳು ಮುಗಿದ ಕೂಡಲೇ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!