Mysore
20
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಿಂದಾಗಿ ರೈಲಿನ ಎಂಜಿನ್‌ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿನಾಡು ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ರೈಲು ಸೈರಾಂಗ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವೇಳೆ ಶನಿವಾರ ಬೆಳಗಿನ ಜಾವ 2.17ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರೈಲು ಸಂಖ್ಯೆ 20507 ಡಿಎನ್‌ ಸೈರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ಹಳಿಯಲ್ಲಿ ಆನೆಗಳನ್ನು ಡಿಕ್ಕಿ ಹೊಡೆದ ಪರಿಣಾಮ ಇಂಜಿನ್‌ ಮತ್ತು ಐದು ಬೋಗಿಗಳು ಹಳಿ ತಪ್ಪಿದ್ದವು. ಘಟನೆಯ ಸ್ಥಳವು ಗುವಾಹಟಿಯಿಂದ ಸುಮಾರು 126 ಕಿಲೋ ಮೀಟರ್‌ ದೂರದಲ್ಲಿದೆ.

ಈ ಪ್ರದೇಶವನ್ನು ಗೊತ್ತುಪಡಿಸಿದ ಆನೆ ಕಾರಿಡಾರ್‌ ಎಂದು ಗುರುತಿಸಲಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!