ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ.
ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು ಹೋಗುವ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಜಮೀನಿನ ಪಕ್ಕದಲ್ಲೇ ಇದ್ದ ಆನೆಮಡುವಿನ ಕೆರೆಯ ಬಳಿ ಹುಲಿಗಳನ್ನು ನೋಡಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆ ಭಾಗದ ರೈತರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





