Mysore
24
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

lakshmi habbalkar

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆಯವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸೋಮವಾರದಿಂದ ಮುಂದಿನ ಶನಿವಾರದ ಒಳಗೆ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ರಾಜ್ಯದ 1.26 ಕೋಟಿ ಗೃಹಲಕ್ಷ್ಮೀಯರ ಖಾತೆಗೆ ಸೋಮವಾರದಿಂದ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಹೇಳಿದರು.

Tags:
error: Content is protected !!