Mysore
16
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ.

ಜೋಹಾನ್ಸ್‌ಬರ್ಗ್‌ನಿಂದ ಸುಮಾರು 40 ಕಿಮೀ ದೂರದಲ್ಲಿರುವ ಬೆಕರ್ಸ್‌ಡಾಲ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಯಾವುದೇ ಸುಳಿವಿಲ್ಲದಂತೆ ಮದ್ಯದಂಗಡಿಗೆ ನುಗ್ಗಿದ ಬಂದೂಕುಧಾರಿಗಳು ಏಕಾಏಕಿ ಜನಸಮೂಹದ ಮೇಲೆ ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಗಾಯಾಳುಗಳನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ನಂತರ ತನಿಖೆ ಆರಂಭಿಸಿದ್ದು, ಈವರೆಗೆ ಯಾವುದೇ ಶಂಕಿತರನ್ನ ಗುರುತಿಸಲಾಗಿಲ್ಲ ಎಂದು ಹೇಳಿದ್ದಾರೆ.

ಘಟನೆ ಕುರಿತು ಗೌಟೆಂಗ್ ಪ್ರಾಂತ್ಯದ ಪೊಲೀಸ್ ವಕ್ತಾರ ಬ್ರೆಂಡಾ ಮುರಿಡಿಲಿ ಮಾತನಾಡಿ, ಗುಂಡಿನ ದಾಳಿ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಸದ್ಯಕ್ಕೆ ಮೃತರ ವಿವರಗಳನ್ನ ಕಲೆಹಾಕಲಾಗುತ್ತಿದೆ. ಜೊತೆಗೆ ದಾಳಿ ನಡೆದ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಈ ದಾಳಿಯು ಭೀತಿ ಮತ್ತು ಅವ್ಯವಸ್ಥೆಗೆ ಕಾರಣವಾಗಿದೆ. ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಇದರಿಂದ ಹಲವು ಸಾವು ನೋವುಗಳು ಸಂಭವಿಸಿದೆ.

Tags:
error: Content is protected !!