Mysore
27
overcast clouds

Social Media

ಮಂಗಳವಾರ, 21 ಜುಲೈ 2026
Light
Dark

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ ರಾಜೀನಾಮೆ ನೀಡಿದ್ದಾರೆ.

ವೈದ್ಯ ಡಾ.ಕುಲದೀಪ್‌ ಎಂ.ಡಿ ಅವರು ಕೊಲ್ಲಮಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

Tags:
error: Content is protected !!