Mysore
22
haze

Social Media

ಮಂಗಳವಾರ, 06 ಜನವರಿ 2026
Light
Dark

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಸಮೀಪದ ಗುಂಜಿಗನೂರು ಗೇಟ್ ಬಳಿ ಸೋಮವಾರ ಸಮುದಾಯ ಆರೋಗ್ಯ ಕೇಂದ್ರ (ಹೈಟೆಕ್ ಆಸ್ಪತ್ರೆ) ನೂತನ ಕಟ್ಟಡ ಮತ್ತು ವಸತಿ ಗೃಹಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕ ವಲಯದಲ್ಲಿ ಆರೋಗ್ಯ ಇಲಾಖೆಗೆ ದೊಡ್ಡ ಜವಾಬ್ದಾರಿ ಇದೆ. ಎಲ್ಲವನ್ನೂ ನೀಡಲು ಸಾಧ್ಯವಿಲ್ಲ ಆದಾಗ್ಯೂ, ಗ್ರಾಮೀಣ ಮಟ್ಟದಲ್ಲಿ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯ ಸೇವೆಗಳು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಉನ್ನತ ಮಟ್ಟದ ತಜ್ಞ ವೈದ್ಯ ಸೇವೆಗಳು, ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಜಾರಿಗೆ ತರುವ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:-India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ತಾಲ್ಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ೨೪*೭ ಕಾರ್ಯನಿರ್ವಹಣೆ ಮಾಡುವಂತೆ ತೀರ್ಮಾನ ಮಾಡಲಾಗಿದ್ದು, ಪ್ರತಿಯೊಂದು ತಾಲ್ಲೂಕು ಆಸ್ಪತೆಗಳಲ್ಲಿ ೨ ಸ್ತ್ರೀ ರೋಗ ತಜ್ಞರು, ೨ ಅರವಳಿಕೆ ತಜ್ಞರು, ೨ ಮಕ್ಕಳು ತಜ್ಞರು, ರೇಡಿಯೋಲಾಜಿಸ್ಟ್, ಪ್ರಸೂತಿ ತಜ್ಞರು ಸೇರಿದಂತೆ ಇತರೆ ತಜ್ಞ ವೈದ್ಯರು ಇರಲೇಬೇಕು. ಸಾರ್ವಜನಿಕರು ದಿನದ ೨೪ ಗಂಟೆಯಲ್ಲಿ ಯಾವಾಗಬೇಕಾದರೂ ಆಸ್ಪತ್ರೆಗೆ ಆಗಮಿಸಿದರೂ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು ಎಂದು ತಿಳಿಸಿದರು.

Tags:
error: Content is protected !!