ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಮ್ಯಾಚ್ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿದ್ದಾರೆ.
ಇದನ್ನು ಓದಿ: ಬಹುನಿರಿಕ್ಷೀತ ಕ್ರಿಕೆಟ್ ಸ್ಟೇಡಿಯಂ ಕಾಮಗಾರಿ ಚುರುಕು
ಸೂಕ್ತ ರೀತಿಯಲ್ಲಿ ಕ್ರೀಡಾಂಗಣ ಸಿದ್ಧಪಡಿಸಿದ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ನಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ಕೋರಲಾಗಿತ್ತು. ಪ್ರೇಕ್ಷಕರಿಲ್ಲದೇ ಪಂದ್ಯ ನಡೆಸಲಾದರೂ ಅನುಮತಿ ಕೊಡಿ ಎಂದು ಕೇಳಲಾಗಿತ್ತು. ಆದರೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಅನುಮತಿ ನಿರಾಕರಿಸಲಾಗಿದೆ.





