Mysore
15
clear sky

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ. ನುರಿತ ತಜ್ಞರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಎಲ್ಲಾ ಮಾಹಿತಿ ಪಡೆದು ಸಲಹೆ ನೀಡುತ್ತೇನೆ. ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗುವ ವಿಚಾರ ಕುರಿತು ಮಾತನಾಡಿದ ಅವರು, ಡಿಕೆಶಿಗೆ ದೆಹಲಿಗೆ ಹೋಗುತ್ತಿರುತ್ತಾರೆ, ಬರುತ್ತಾರೆ. ಅದರಲ್ಲಿ ವಿಶೇಷ ಏನು? ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ತೀರ್ಮಾನ ಎಂದಿದ್ದಾರೆ. ಪಕ್ಷದ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ರಾಹುಲ್‌ ಗಾಂಧಿ ತೀರ್ಮಾನಕ್ಕೆ ಎಲ್ಲರೂ ಬದ್ಧ ಎಂದು ಸಿಎಂ ಹೇಳಿದ್ದಾರೆ. ಅದರಲ್ಲಿ ಇನ್ನೇನಿದೆ ಎಂದು ಹೇಳಿದರು.

Tags:
error: Content is protected !!