Mysore
27
overcast clouds

Social Media

ಗುರುವಾರ, 11 ಜೂನ್ 2026
Light
Dark

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು, ಬೆಂಗಳೂರು ನಗರದಿಂದ ಹಾಸನ- ಮಂಗಳೂರು ಜಂಕ್ಷನ್‌- ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ವರೆಗೆ ಅತಿವೇಗದ ವಂದೇ ಭಾರತ್‌ ರೈಲು ಸೇವೆ ಆರಂಭಿಸುವಂತೆ ಕೋರಿದ್ದಾರೆ.

ಇದನ್ನು ಓದಿ: 20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು: ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು

ಈ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ವಂದೇ ಭಾರತ್ ರೈಲು ಸಂಚಾರಕ್ಕೆ ಅವಕಾಶ ನೀಡುವುದರಿಂದ ಕರಾವಳಿ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಅಭಿವೃದ್ಧಿಗೂ ಹೆಚ್ಚು ಪೂರಕವಾಗಿರುತ್ತದೆ ಎಂದು ಸಚಿವರು ರೈಲ್ವೆ ಸಚಿವರ ಗಮನ ಸೆಳೆದಿದ್ದಾರೆ.

ಪಶ್ಚಿಮಘಟ್ಟ ಪ್ರದೇಶ ಸೇರಿದಂತೆ ಈ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವೇಗದ ರೈಲು ಸೇವೆ ಆರಂಭಿಸಲು ಇದೀಗ ಸರ್ವ ರೀತಿಯ ಅನುಕೂಲಕರ ಮೂಲ ಸೌಲಭ್ಯಗಳಿವೆ ಎಂದು ಕುಮಾರಸ್ವಾಮಿ ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

Tags:
error: Content is protected !!